ಗದಗನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಶಾಸಕ ಈಶಣ್ಣ ಗುಳಗಣ್ಣವರ ಇನ್ನಿಲ್ಲ
ಪ್ರಜಾಪಥ ವಾರ್ತೆ
ಕೊಪ್ಪಳ: ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕ ಈಶಣ್ಣ ಗುಳಗಣ್ಣವರ(69) ಅವರು ಶನಿವಾರ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಈಶಣ್ಣ ಅವರನ್ನು ಗದಗಿನ ಸಿಎಸ್ಐ (ಜರ್ಮನ್) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.
ಮೃತರಿಗೆ ಇಬ್ಬರು ಪುತ್ರರು ಮತ್ತು ಪತ್ನಿ ಇದ್ದಾರೆ. 2008ರಲ್ಲಿ ಬಿಜೆಪಿಯಿಂದ ಯಲಬುರ್ಗಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಈಶಣ್ಣ ಶಾಸಕರಾಗಿ ಆಯ್ಕೆಯಾಗಿದ್ದರು. ರವಿವಾರ ಸ್ವಗ್ರಾಮ ಇಟಗಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಈಶಣ್ಣರ ಹಿರಿಯ ಪುತ್ರ ನವೀನ ಗುಳಗಣ್ಣನವರ ತಿಳಿಸಿದ್ದಾರೆ.