ಗೋವಾದಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣ: ಗದಗದಲ್ಲಿ ಆರೋಪಿಯನ್ನು ಬಂಧಿಸಿದ ಗೋವಾ ಪೊಲೀಸರು!

Spread the love

ರಷ್ಯಾ ಮೂಲದ ಬಾಲಕಿ ಮೇಲೆ ಅತ್ಯಾಚಾರ ಆರೋಪ

 

ಪ್ರಜಾಪಥ ವಾರ್ತೆ

ಗದಗ/ಪಣಜಿ: ಗೋವಾದಲ್ಲಿ ರಷ್ಯಾ ಮೂಲದ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಪೊಲೀಸರು ಆರೋಪಿಯನ್ನು ಗದಗನಲ್ಲಿ ಈಚೆಗೆ ಬಂಧಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಂಧಿತನನ್ನು ರವಿ ಲಮಾಣಿ (28) ಎಂದು ಗುರುತಿಸಲಾಗಿದೆ. ಕಳೆದ ಮೇ. 6 ರಂದು ಉತ್ತರ ಗೋವಾದ ಅರಂಬೋಲ್‌ನಲ್ಲಿರುವ ರೆಸಾರ್ಟ್‌ನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ಸಂಭವಿಸಿತ್ತು. ಗೋವಾದ ಪೆರ್ನೆಮ್‌ ಠಾಣೆ ಪೊಲೀಸರು ಆರೋಪಿ ರವಿ ಲಮಾಣಿ (28)ಯನ್ನು ಮೇ 10 ರಂದು ಗದಗದಲ್ಲಿ ಬಂಧಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಪೆರ್ನೆಮ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಿಕ್ರಮ್ ನಾಯಕ್, ‘ರೆಸಾರ್ಟ್‌ನಲ್ಲಿ ರೂಮ್ ಅಟೆಂಡರ್‌ ಆಗಿದ್ದ ಆರೋಪಿಯು ಈಜು ಕೊಳ ಮತ್ತು ಕೊಠಡಿಯೊಳಗೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಎಂದು ಸಂತ್ರಸ್ತೆಯ ತಾಯಿ ಮೇ 9 ರಂದು ದೂರು ದಾಖಲಿಸಿದ್ದರು.

ಸಂತ್ರಸ್ತೆ ತಾಯಿ ಕೆಲ ಅಗತ್ಯ ವಸ್ತುಗಳನ್ನು ಕೊಂಡು ತರಲೆಂದು ಅರಂಬೋಲ್‌ನ ಮಾರುಕಟ್ಟೆಗೆ ಹೋಗಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಘಟನೆಯ ನಂತರ ಆರೋಪಿ ಪರಾರಿಯಾಗಿದ್ದ. ‘ದೂರು ಸ್ವೀಕರಿಸಿದ 24 ಗಂಟೆಯೊಳಗೆ ಆರೋಪಿಯನ್ನು ಗದಗದಲ್ಲಿ ಪತ್ತೆ ಹಚ್ಚಿ, ಬಂಧಿಸಲಾಯಿತು,’ ಎಂದು ಹೇಳಿದರು ನಾಯಕ್ ಹೇಳಿದರು.

ಲಮಾಣಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 376 (ಅತ್ಯಾಚಾರ), ಗೋವಾ ಮಕ್ಕಳ ರಕ್ಷಣಾ ಕಾಯ್ದೆಯ ಸೆಕ್ಷನ್ 8 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *