ಗದಗ ಜಿಲ್ಲೆಯಲ್ಲಿ ನಿಲ್ಲದ ಮಳೆ: ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ ಸುಂದರೇಶಬಾಬು
ಪ್ರಜಾಪಥ ವಾರ್ತೆ
ಗದಗ ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಎಲ್ಲಾ ಅಂಗನವಾಡಿ, ಶಾಲೆಗಳಿಗೆ ಇಂದು ಮೇ.20 ರಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರು ರಜೆ ಘೋಷಿಸಿದ್ದಾರೆ.
ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಮತ್ತು ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮೇ.20 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ನೀಡಲಾಗಿದೆ.
ನಿನ್ನೆ ಮೇ.19 ರಿಂದ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಳೆಯಾಗುತ್ತಿದ್ದು, ಇಂದು ಮುಂದುವರೆದಿದೆ. ಜನ ಹಾಗೂ ಜಾನುವಾರುಗಳ ಸುರಕ್ಷತೆಗೆ ಜಿಲ್ಲೆಯ ಸಾರ್ವಜನಿಕರು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.