ಪ್ರಜಾಪಥ ವಾರ್ತೆ
ಕುಶಾಲನಗರ (ಕೊಡಗು): ಕುಶಾಲನಗರ ತಾಲೂಕು ಸ್ವೀಪ್ ಹಾಗೂ ಕುಶಾಲನಗರ ಪುರಸಭೆ ಸಹಯೋಗದಲ್ಲಿ ಮತದಾನ ಜಾಗೃತಿ, ಕಾಲ್ನಡಿಗೆ ಜಾಥ ನಡೆಯಿತು.
ಬೈಚನಹಳ್ಳಿಯ ಮಾರಮ್ಮ ದೇವಾಲಯದಿಂದ ಆರಂಭವಾದ ಜಾಥ ದಲ್ಲಿ ಶಾಲಾ ವಿದ್ಯಾರ್ಥಿಗಳು ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಜಾಥ ದಲ್ಲಿ ಪಾಲ್ಗೊಂಡು ಜನರಲ್ಲಿ ಕಡ್ಡಾಯ ಮತದಾನ ಮಾಡುವಂತೆ ಜಾಗೃತಿ ಮೂಡಿಸಿದರು. ಇದೇ ಸಂದರ್ಭ ಬೀದಿ ನಾಟಕ ಮಾಡುವ ಮೂಲಕ ಮತದಾನ ಜಾಗೃತಿ ಮೂಡಿಸಿದರು.ಈ ಸಂದರ್ಭ ಮಾತನಾಡಿದ ಇಓ ಭವಾನಿ ಶಂಕರ್ 18 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು.ಐದು ವರ್ಷಕ್ಕೆ ಒಮ್ಮೆ ಬರುವ ಚುನಾವಣೆ ಒಂದು ಹಬ್ಬ ಇದ್ದಂತೆ ಆದ್ದರಿಂದ ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಮತದಾನದ ಈ ಹಬ್ಬದಲ್ಲಿ ಪಾಲ್ಗೊಳ್ಳಬೇಕು ಎಂದರು.
ನಂತರ ಮಾತನಾಡಿದ ಪುರಸಭೆ ಆರೋಗ್ಯ ಅಧಿಕಾರಿ ಉದಯ್ ಕುಮಾರ್ ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು ನಿಮ್ಮ ಅಕ್ಕಪಕ್ಕದ ನಿವಾಸಿಗಳಿಗೆ ಸಹ ಮತದಾನ ಮಾಡುವಂತೆ ಯುವಕರು ಯುವತಿಯರು ಕಾರ್ಯ ಪ್ರವೃತ್ತರಾಗಬೇಕು ಅತಿ ಹೆಚ್ಚು ಮತದಾನ ಮಾಡುವುದರ ಮೂಲಕ ತಮ್ಮ ಕರ್ತವ್ಯವನ್ನು ಪಾಲಿಸಬೇಕು ಎಂದರು.
ಈ ಸಂದರ್ಭದಲ್ಲಿ ಪುರಸಭೆ ಪೌರ ಕಾರ್ಮಿಕರು ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಅಧ್ಯಕ್ಷರು ಪದಾಧಿಕಾರಿಗಳು ಹಾಜರಿದ್ದರು.