ಪ್ರಜಾಪಥ ವಾರ್ತೆ
ಕುಶಾಲನಗರ (ಕೊಡಗು): ಕುಶಾಲನಗರ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದ ಶರೀಫ್ ಇಬ್ರಾಹಿಂ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರಿದ್ದ ಅವರು ಇದೀಗ ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ.
ಇತ್ತೀಚೆಗೆ ನೆಲ್ಲಿಹುದುಕೇರಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮದ ಉತ್ತಪ್ಪ ವಿರಾಜಪೇಟೆ ಕ್ಷೇತ್ರದ ಶಾಸಕ ಎ ಎಸ್ ಪೊನ್ನಣ್ಣ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.
ಈ ಸಂದರ್ಭ ಡಿ.ಸಿ.ಸಿ. ಕಾರ್ಯಾಧ್ಯಕ್ಷ ಬಾಪು ರಾಜ್ಯ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಎಂ.ಇ. ಉಸ್ಮಾನ್ ಮುಖಂಡರಾದ ವೀಣಾ ಅಚ್ಚಯ್ಯ ಹಸೇನಾರ್ ಹಾಜಿ. ನಾಪಂಡ ಮುತ್ತಪ್ಪ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಣ್ ಮತ್ತಿತರರು ಇದ್ದರು.
ಶರೀಫ್ ಇಬ್ರಾಹಿಂ ಅವರ ಜೊತೆಗೆ ಎಂಪಿ ರಫೀಕ್ ಚಾಂದು ಅಶ್ರಫ್. ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯ ಶಬ್ಬೀರ್. ಮಾಜಿ ಅಧ್ಯಕ್ಷ ಕರೀಂ ಮತ್ತಿತ್ತರು ಪಕ್ಷ ಸೇರ್ಪಡೆಯಾದರು