ಪ್ರಜಾಪಥ ವಾರ್ತೆ
ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಇಂದು ಬೆಳಗಿನ ಜಾವ ನಡೆದಿರುವ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ಹತ್ಯೆಯಾದ ಸ್ಥಳಕ್ಕೆ ಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸಕುಮಾರ ಭೇಟಿ ನೀಡಿ, ಪರಿಶೀಲಿಸಿದರು.
ಅಪರಾಧಿಗಳ ಪತ್ತೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಸಧ್ಯ ಸಿಕ್ಕಿರುವ ಪ್ರಾಥಮಿಕ ಮಾಹಿತಿ ಆಧಾರದ ಮೇಲೆ ವಿಭಿನ್ನ ಆಯಾಮಗಳಲ್ಲಿ ತನಿಖೆ ಮಾಡಲಾಗುವುದು.
ಹತ್ಯೆಯ ಭೀಕರತೆಯನ್ನು ಗಮನಿಸಿದರೆ ಕಳ್ಳತನ, ಧರೋಡೆಗೆ ಬಂದಿದ್ದಲ್ಲ, ಕೊಲೆ ಮಾಡುವ ಉದ್ದೇಶಕ್ಕೆ ಬಂದಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ.
ಮಧ್ಯರಾತ್ರಿ ಗಾಢನಿದ್ರೆ ಸಮಯ ಆಗಿದ್ದರಿಂದ ಕೊಲೆ ಸಂದರ್ಭದಲ್ಲಿ ಕೂಗಾಟ ಕೇಳಿ ಬಂದಿರದ ಸಾಧ್ಯತೆ ಇಲ್ಲ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ತನಿಖೆ ನಂತರವಷ್ಟೇ ನಿಖರ ಕಾರಣ ತಿಳಿದು ಬರಲಿದೆ
ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳನ್ನು ಶೀಘ್ರದಲ್ಲಿ ವಶಕ್ಕೆ ಪಡೆಯಲಾಗುವುದು ಎಂದು ಮಾಧ್ಯಮದವರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಸೇರಿ ಪೊಲೀಸ್ ಅಧಿಕಾರಿಗಳು ಇದ್ದರು.