ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಮಳೆ
ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
ಪ್ರಜಾಪಥ ವಾರ್ತೆ
ಗದಗ: ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲಾದ್ಯಂತ ಶನಿವಾರ ಬೆಳ್ಳಂಬೆಳಗ್ಗೆ ಗುಡುಗು-ಸಿಡಿಲಿನ ಮಧ್ಯೆ ವರುಣಾರ್ಭಟ ಆರಂಭವಾಗಿದೆ.
ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಉಂಟಾಗಿತ್ತು, 8ರ ನಂತರ ಗುಡುಗು-ಸಿಡಿಲಿನ ಆರ್ಭಟದ ನಡುವೆ ಮಳೆ ಆರಂಭವಾಯಿತು.
8.40 ರ ಸುಮಾರಿಗೆ ಆರಂಭವಾದ ಮಳೆ, ಗಂಟೆಗೂ ಅಧಿಕ ಕಾಲ ಧಾರಾಕಾರವಾಗಿ ಸುರಿಯುತ್ತಿದ್ದು, ರೈತರಲ್ಲಿ ಹರ್ಷವನ್ನುಂಟು ಮಾಡಿದೆ. ಮುಂಗಾರು ಆರಂಭಕ್ಕೆ ಉತ್ತಮ ಮಳೆಯಾಗುವ ಲಕ್ಷಣಗಳು ಗೋಚರಿಸಿದ್ದು, ಸಂತಸ ಹೆಚ್ಚಾಗುವಂತೆ ಮಾಡಿದೆ.
ಏ. 13ರಿಂದ ಅಶ್ವಿನಿ ಮಳೆ ಆರಂಭವಾಗಿದ್ದು,
ವಾರದೊಳಗೆ ಜಿಲ್ಲೆಯಲ್ಲಿ ಮೂರು ಮಳೆಯಾಗಿದ್ದು, ಮಳೆ ಉತ್ತಮವಾಗುವ ನಿರೀಕ್ಷೆ ಹೆಚ್ಚಿಸಿದೆ.