ಮೈಸೂರಿನ ಸ್ಟ್ರಾಂಗ್ ರೂಂನಲ್ಲಿ ಮತ ಯಂತ್ರಗಳು
ಪ್ರಜಾಪಥ ವಾರ್ತೆ
ಕುಶಾಲನಗರ (ಕೊಡಗು): ಮೈಸೂರು- ಕೊಡಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ, ವಿವಿ ಪ್ಯಾಟ್‌ಗಳನ್ನ ಸೀಲ್ ಮಾಡಿ ಸ್ಟ್ರಾಂಗ್ ರೂಂಗಳಿಗೆ ರವಾನೆ ಮಾಡಿದ್ದಾರೆ.ಈ ಸಂದರ್ಭದ ಮೈಸೂರು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ಮೈಸೂರು ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್. ಅವರು ಸ್ಟ್ರಾಂಗ್ ರೂಮ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಮೈಸೂರು ಜಿಲ್ಲಾಧಿಕಾರಿಗಳು ಮತಯಂತ್ರಗಳಿಗೆ ಮೂರು ಹಂತದ ಭದ್ರತೆನೀಡಲಾಗುತ್ತಿದ್ದು
ಇವಿಎಂ, ವಿವಿ ಪ್ಯಾಟ್ ಇರುವ ರೂಂ ಗಳಿಗೆ ಮೊದಲ ಹಂತದಲ್ಲಿ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ತುಕಡಿ, 2ನೇ ಹಂತದಲ್ಲಿ ಕರ್ನಾಟಕ ಸಶಸ್ತ್ರ ಮೀಸಲು ಪಡೆ ಹಾಗೂ 3ನೇ ಹಂತದಲ್ಲಿ ಸ್ಥಳೀಯ ಸಿವಿಲ್ ಪೊಲೀಸ್ ಸಿಬ್ಬಂದಿ ಯನ್ನು ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದೆ. ಕಟ್ಟಡದ ಎಲ್ಲಾ ಸ್ಟ್ರಾಂಗ್ ರೂಂಗಳು, ಮತ ಎಣಿಕಾ ಕೇಂದ್ರಗಳಿಗೆ ಹೆಚ್ಚು ಸಿಸಿ ಕ್ಯಾಮರಾಗಳನ್ನು ಅಳವಡಿಸಿ, ಕಟ್ಟೆಚ್ಚರ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಎಂ.ಮುತ್ತು ರಾಜ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಮಹೇಶ್ ಹಾಗೂ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ್ ಸೇರಿದಂತೆ ಇತರೆ ಚುನಾವಣಾ ಅಧಿಕಾರಿಗಳು ಹಾಜರಿದ್ದರು.
ಕೊಡಗು ಜಿಲ್ಲೆಯಲ್ಲಿ ಅಂತಿಮವಾಗಿ ಶೇಕಡ 74.74 ಮತದಾನ: ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕೊಡಗು ಜಿಲ್ಲೆಯಲ್ಲಿ ಮತದಾನ ಪೂರ್ಣವಾಗಿದ್ದು ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ ಜಿಲ್ಲೆಯಲ್ಲಿ ಶೇಕಡ 74. 74 ರಷ್ಟು ಅಂದಾಜು ಮತದಾನವಾಗಿದೆ.
ಅಂತಿಮ ಮತದಾನದ ವಿವರ.
ವಿಧಾನಸಭಾ ಕ್ಷೇತ್ರವಾರು ಇವರ ಇಂತಿದೆ.
ಮಡಿಕೇರಿ 75.41.
ವಿರಾಜಪೇಟೆ 73.88
ಪಿರಿಯಾಪಟ್ಟಣ 80.19
ಹುಣಸೂರು 77.91
ಚಾಮುಂಡೇಶ್ವರಿ 73.40
ಕೃಷ್ಣರಾಜ 60.87
ಚಾಮರಾಜ 60.98
ನರಸಿಂಹರಾಜ 65.55