Prajapath

ಮುಖ್ಯಾಂಶಗಳು

ಡೆಂಗ್ಯೂ ಸೇರಿ  ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಿ: ಡಿಸಿ ವೆಂಕಟ್ ರಾಜಾ

Spread the love

 

ಪ್ರಜಾಪಥ ವಾರ್ತೆ

ಕುಶಾಲನಗರ (ಕೊಡಗು): ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡೆಂಗ್ಯೂ ಹಾಗೂ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ನಡೆದ ಜಿಲ್ಲಾ ಸರ್ವೇಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪೂರ್ವ ಮುಂಗಾರು ಸಂದರ್ಭದಲ್ಲಿ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜೊತೆಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

‘ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸತೀಶ್ ಕುಮಾರ್ ಅವರು ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 42 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ ನಾಯಿ ಕಡಿತಕ್ಕೆ 3,144, ಹಾವು ಕಡಿತಕ್ಕೆ 89 ಮಂದಿ, ಬೇಧಿ(ಡಯೇರಿಯಾ) ಪ್ರಕರಣಗಳು 1,486, ಕಾಲರಾ 2 ಪ್ರಕರಣ, ಮಲೇರಿಯಾ 2 ಪ್ರಕರಣಗಳು ವರದಿಯಾಗಿದ್ದು, ಎಲ್ಲರೂ ಸಕಾಲದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದರು.’

ಡೆಂಗ್ಯೂ ಜ್ವರವು ವೈರಸ್‌ನಿಂದ ಉಂಟಾಗುವ ಖಾಯಿಲೆಯಾಗಿದ್ದು, ಈಡಿಸ್ ಈಜಿಪ್ಟೆöÊ ಸೊಳ್ಳೆ ಕಚ್ಚುವಿಕೆಯಿಂದ ಹರಡುತ್ತದೆ. ಈಡಿಸ್ ಸೊಳ್ಳೆಯು ಸ್ವಚ್ಚ ನೀರಿನಲ್ಲಿ ಸಂತಾನಾಭಿವೃದ್ಧಿ ಮಾಡುತ್ತವೆ. ಅವು ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ತೀವ್ರ ಜ್ವರ ಮತ್ತು ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸ ಖಂಡ/ ಕೀಲುಗಳಲ್ಲಿ ವಿಪರೀತ ನೋವು ಡೆಂಗ್ಯೂ ಜ್ವರದ ಲಕ್ಷಣವಾಗಿದೆ ಎಂದು ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿದರು.

ತೀವ್ರ ಸ್ಥಿತಿಯ ಹಂತದಲ್ಲಿ ಬಾಯಿ, ಮೂಗು, ವಸಡುಗಳಲ್ಲಿ ರಕ್ತಸ್ರಾವ, ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತು ಕಂಡು ಬರುತ್ತದೆ ಎಂದು ತಿಳಿಸಿದರು.

ಆಶಾ ಕಾರ್ಯಕರ್ತರು ಪ್ರತೀ 15 ದಿನಗಳಿಗೊಮ್ಮೆ ತಮ್ಮ ವ್ಯಾಪ್ತಿಯ ಮನೆ ಮನೆಗೆ ಭೇಟಿ ನೀಡಿ ಈಡಿಸ್ ಸೊಳ್ಳೆ ಲಾರ್ವಾ ಸೋರ್ಸ್ ರಿಡಕ್ಷನ್ ಕೈಗೊಳ್ಳುತ್ತಿದ್ದಾರೆ ಎಂದು ವಿವರಿಸಿದರು.

ನಗರ ಪಟ್ಟಣ ವ್ಯಾಪ್ತಿಯಲ್ಲಿ ಪ್ರತೀ ಮಾಹೆಯ ಮೊದಲ ಮತ್ತು ಮೂರನೇ ವಾರ ಆಯಾಯ ತಾಲ್ಲೂಕಿನ ಎಲ್ಲಾ ಆರೋಗ್ಯ ಸಹಾಯಕರನ್ನು ನಿಯೋಜಿಸಿಕೊಂಡು ಮನೆಗಳಲ್ಲಿ ಈಡಿಸ್ ಸೊಳ್ಳೆ ಲಾರ್ವಾ ಸೋರ್ಸ್ ರಿಡಕ್ಷನ್ ಕೈಗೊಳ್ಳುತ್ತಿದ್ದಾರೆ ಎಂದು ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿದರು.

ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಸಮಗ್ರ ರೋಗಗಳ ಕಣ್ಗಾವಲು ಘಟಕದ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಬಿ.ಎಲ್.ಶ್ರೀನಿವಾಸ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ವಿವಿಧ ಇಲಾಖೆ ಅಧಿಕಾರಿಗಳು ಹಲವು ಮಾಹಿತಿ ನೀಡಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Click to comment

Leave a Reply

Your email address will not be published. Required fields are marked *

Most Popular

To Top
error: Content is protected !!