ಅಂತರ್ ಕಾಲೇಜು ಪದವಿ ಮಟ್ಟದ ಪುರುಷರ ಬಾಲ್ ಬ್ಯಾಡ್ಮಿಂಟನ್ ಟೂರ್ನಿ
ಪ್ರಜಾಪಥ ವಾರ್ತೆ
ಕುಶಾಲನಗರ ( ಕೊಡಗು ) : ಕಾರ್ಕಳ ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಪದವಿ ಮಟ್ಟದ ಪುರುಷರ ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕುಶಾಲನಗರದ ಸಾರಂಗಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದ್ವಿತೀಯ ಸ್ಥಾನ ಒಡೆಯುವ ಮೂಲಕ ಮೊದಲ ಬಾರಿಗೆ ಈ ಸಾಧನೆ ಮಾಡಿದೆ.
ಸುಮಾರು 14 ತಂಡಗಳು ಭಾಗವಹಿಸಿದ್ದ ಈ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ಮೂಲಕ ಕ್ರೀಡಾಭಿಮಾನಿಗಳ ಮನಸೂರೆಗೊಂಡ ಕುಶಾಲನಗರ ಪದವಿ ಕಾಲೇಜು ತಂಡ ಫೈನಲ್ ಹಂತಕ್ಕೆ ತಲುಪಿತ್ತು.
ಫೈನಲ್ ಪಂದ್ಯದಲ್ಲಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿರುದ್ದ ಉತ್ತಮ ಪೈಪೋಟಿ ನೀಡಿದರೂ ಕೂಡ ಆಳ್ಚಾಸ್ ತಂಡದ ಆಟದ ಮುಂದೆ ಶರಣಾಗುವುದರ ಮೂಲಕ ಇದೇ ಮೊದಲ ಬಾರಿಗೆ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದ್ಚಿತೀಯ ಸ್ಥಾನ ಪಡೆಯುವ ಮೂಲಕ ಕೀರ್ತಿ ತಂದಿದ್ದಾರೆ.
ಸೋಮವಾರ ಕಾಲೇಜಿಗೆ ಆಗಮಿಸಿದ ಬಾಲ್ ಬ್ಯಾಡ್ಮಿಂಟನ್ ತಂಡಕ್ಕೆ ವಿದ್ಯಾರ್ಥಿಗಳು, ಪ್ರಾಂಶುಪಾಲರು, ಸಹಪ್ರಾದ್ಯಾಪಕರು, ಉಪನ್ಯಾಸಕರು, ಸಿಬ್ಬಂದಿಗಳು ಅದ್ದೂರಿ ಸ್ವಾಗತ ನೀಡಿ ಅಭಿನಂಧಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಬಿ.ಎಂ.ಪ್ರವೀಣ್ ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕಿ ಜಯಂತಿ, ತಂಡದ ವ್ಯವಸ್ಥಾಪಕ ಮಹಾದೇವ್ ಇದ್ದರು