ಪ್ರಜಾಪಥ ವಾರ್ತೆ
ಗದಗ: ಗದುಗಿನ ಕಾಂಗ್ರೆಸ್ ಪಕ್ಷದ ಮುಖಂಡ, ಗದಗ-ಬೆಟಗೇರಿ ನಗರಸಭೆಯ ಮಾಜಿ ಅಧ್ಯಕ್ಷ ಪೀರಸಾಬ ಕೌತಾಳ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರದ ಆಧೀನ ಕಾರ್ಯದರ್ಶಿ (ಸಾರಿಗೆ ಇಲಾಖೆ) ಪುಷ್ಪಾ ವ್ಹಿ.ಎಸ್.ಆದೇಶ ಹೊರಡಿಸಿದ್ದಾರೆ.
ಎರಡು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಸರ್ಕಾರದ ಆಧೀನ ಕಾರ್ಯದರ್ಶಿ (ಸಾರಿಗೆ ಇಲಾಖೆ) ಪುಷ್ಪಾ ವ್ಹಿ.ಎಸ್.ಆದೇಶ ಹೊರಡಿಸಿದ್ದಾರೆ.
ಪೀರಸಾಬ ಕೌತಾಳ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ, ಮಾಜಿ ಶಾಸಕ ಡಿ.ಆರ್.ಪಾಟೀಲ ಅಭಿನಂದಿಸಿ ಇವರ ಅಧಿಕಾರದ ಅವಧಿಯಲ್ಲಿ ಸಾರಿಗೆ ಇಲಾಖೆಯಲ್ಲಿ ಅಭಿವೃದ್ಧಿ ಕಾರ್ಯಗಳಾಗಲಿ ಎಂದಿದ್ದಾರೆ.