ಪ್ರಜಾಪಥ ವಾರ್ತೆ
ನರಗುಂದ: ಕಾರು ಮತ್ತು ಸರ್ಕಾರಿ ಸಾರಿಗೆ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕು ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಹಾವೇರಿ ಮೂಲದ ರುದ್ರಪ್ಪ ಅಂಗಡಿ (55), ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16), ಮಗ ವಿಜಯ (12) ಮೃತಪಟ್ಟ ದುರ್ದೈವಿಗಳು.
ಇಳಕಲ್ ನಿಂದ ಹುಬ್ಬಳ್ಳಿ ಗೆ ಹೊರಟ್ಟಿದ್ದ ಸಾರಿಗೆ ಬಸ್ ಮತ್ತು ಹಾವೇರಿಯಿಂದ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರಿನ ನಡುವೆ ಭೀಕರ ಅಪಘಾತ ನಡೆದಿದೆ.
ಕಾರಿನಲ್ಲಿದ್ದವರು ತಮ್ಮೂರಿನಿಂದ ದೇವಸ್ಥಾನಕ್ಕೆ ತೆರಳುತ್ತಿದ್ದರು ಎನ್ನಲಗಿದೆ.