- ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಸೇರಿ ಹಲವರು ಭಾಗಿ
ಪ್ರಜಾಪಥ ವಾರ್ತೆ
ಕುಶಾಲನಗರ : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್, 17 ರಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ಪುಣ್ಯಕಾಲ ನೆರವೇರಲಿದೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್. ಭೋಜೇಗೌಡ, ಡಾ.ಧನಂಜಯ ಸರ್ಜಿ, ಭಾಗಮಂಡಲ ಗ್ರಾ.ಪಂ. ಅಧ್ಯಕ್ಷರಾದ ಕಾಳನ ರವಿ ಇತರರು ಪಾಲ್ಗೊಳ್ಳಲಿದ್ದಾರೆ.
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತರಾದ ವೆಂಕಟೇಶ್ ಎಂ.ವಿ., ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ್ ನರ್ವಡೆ, ತಹಶೀಲ್ದಾರ್ ಪಿ.ಸಿ. ಪ್ರವೀಣ್ ಕುಮಾರ್, ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್, ತಕ್ಕ ಮುಖ್ಯಸ್ಥರಾದ ಬಳ್ಳಡ್ಕ ಸಿ.ಅಪ್ಪಾಜಿ, ಕೋಡಿ.ಯು. ಮೋಟಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.
ತುಲಾ ಸಂಕ್ರಮಣ ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ತುಲಾ ಸಂಕ್ರಮಣ ಜಾತ್ರೆ ಸಂಬAಧ ಮಡಿಕೇರಿ, ಭಾಗಮಂಡಲ, ತಲಕಾವೇರಿಗೆ ಹೋಗುವ ರಸ್ತೆ ಬದಿಯಲ್ಲಿ ಕಾಡನ್ನು ಕಡಿಸಿ ಸುಗಮ ಸಾರಿಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಮಳೆಯಾಗಿರುವ ಹಿನ್ನೆಲೆ ಮಾರ್ಗದ ರಸ್ತೆ ಗುಂಡಿಯನ್ನು ಮುಚ್ಚುವ ಕಾರ್ಯವಾಗಿದೆ. ಪೊಲೀಸ್ ಇಲಾಖೆಯಿಂದ ಜಿಲ್ಲಾ ಮಟ್ಟದಲ್ಲಿ ಬಂದೋಬಸ್ತ್ ಮಾಡಲಾಗಿದ್ದು, ಅಗತ್ಯ ಪೊಲೀಸರನ್ನು ನಿಯೋಜಿಸಲಾಗಿದೆ. ಹಾಗೆಯೇ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ವಿದ್ಯುತ್ ಪೂರೈಕೆಗೆ ಕ್ರಮವಹಿಸಲಾಗಿದೆ.
‘ತಲಕಾವೇರಿ ಜಾತ್ರೆ ಹಿನ್ನೆಲೆ ಭಾಗಮಂಡಲ ದಿಂದ ತಲಕಾವೇರಿಗೆ ಹಾಗೂ ತಲಕಾವೇರಿಯಿಂದ-ಭಾಗಮAಡಲಕ್ಕೆ 15 ಬಸ್‌ಗಳು ಓಡಾಡಲಿದ್ದು, ಭಕ್ತಾಧಿಗಳು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ಮಡಿಕೇರಿ ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕರಾದ ಮೆಹಬೂಬ್ ಅಲಿ ಅವರು ಮಾಹಿತಿ ನೀಡಿದ್ದಾರೆ.’
ತಲಕಾವೇರಿ ತುಲಾ ಸಂಕ್ರಮಣ ತೀರ್ಥೋದ್ಭವ ಹಿನ್ನೆಲೆ ತಾಯಿ ಕಾವೇರಿ ಮಾತೆಯ ಭಕ್ತಿಗೀತೆಗಳ ಗೀತಾ ಗಾಯನ ಕಾರ್ಯಕ್ರಮ ನಡೆಯಲಿದ್ದು, ಈ ಸಂಬಂಧ ಪೆಂಡಾಲ್ ನಿರ್ಮಾಣ ಮಾಡಲಾಗಿದೆ. ಭಕ್ತಾಧಿಗಳ ಪ್ರಸಾದ ವಿನಿಯೋಗಕ್ಕೆ ಅಗತ್ಯ ಸಿದ್ಧತೆಗಳು ನಡೆದಿವೆ.
ಪರಿಸರ ಶುಚಿತ್ವ ಹಾಗೂ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕಂದಾಯ, ಪೊಲೀಸ್, ಪಂಚಾಯತ್ ರಾಜ್, ಸೆಸ್ಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹೀಗೆ ವಿವಿಧ ಇಲಾಖೆಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಆಗಬೇಕಿರುವ ಕೆಲಸಗಳನ್ನು ಕೈಗೊಂಡಿದ್ದಾರೆ.