ಗದಗ ಜಿಲ್ಲಾಧಿಕಾರಿ ಸುಂದರೇಶಬಾಬುಗೆ ವರ್ಗ-ಶ್ರೀಮತಿ ಹೊನ್ನಾಂಬಾ ನೂತನ ಡಿಸಿ
ಪ್ರಜಾಪಥ ವಾರ್ತೆ
ಗದಗ: ಗದಗ ಜಿಲ್ಲಾಧಿಕಾರಿಯಾಗಿದ್ದ ಎಂ.ಸುಂದರೇಶಬಾಬು ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಗದಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಗಳನ್ನಾಗಿ ಕರ್ನಾಟಕ ರಾಜ್ಯ ಚುನಾವಣೆ ಆಯೋಗದ ಕಾರ್ಯದರ್ಶಿಗಳಾಗಿದ್ದ ಶ್ರೀಮತಿ ಹೊನ್ನಾಂಬಾ ಅವರನ್ನು ವರ್ಗಾವಣೆಗೊಳಿಸಿದೆ.
ಈವರೆಗೆ ಗದಗ ಜಿಲ್ಲಾಧಿಕಾರಿಗಳಾಗಿದ್ದ ಎಂ.ಸುಂದರೇಶಬಾಬು ಅವರನ್ನು ಬೆಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾವಣೆಗೊಳಿಸಿದೆ.