ಮಲ್ಲಸಮುದ್ರದಲ್ಲಿ ಗಲಾಟೆ ಪ್ರಕರಣ-ಬಂಧಿತ ಮೂವರಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತ
ಪ್ರಜಾಪಥ ವಾರ್ತೆ
ಗದಗ: ತಾಲ್ಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ನಿನ್ನೆ (ಮಂಗಳವಾರ) ಸಂಜೆ ನಡೆದ ಯುವಕರ ನಡುವಿನ ಗಲಾಟೆಗೆ ಸಂಬಂಧಿಸಿದಂತೆ ಈವರೆಗೆ ಒಟ್ಡು ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಸೋಮು ಗುಡಿ, ಯಲ್ಲಪ್ಪ ಗುಡಿ ಹಾಗೂ ಆತನ ಸ್ನೇಹಿತ ಸಲ್ಮಾನ ಎಂದು ಗುರುತಿಸಲಾಗಿದೆ.
ಗ್ರಾಮದಲ್ಲಿ ಪೊಲೀಸರ ಕಟ್ಟೆಚ್ಚರವಹಿಸಿದ್ದು, ವಾತಾವರಣ ಬೂದಿ ಮುಚ್ಚಿದ ಕೆಂಡದಂತಿದೆ.
ಮತ್ತೊಂದೆಡೆ ಪರಸ್ಪರ ಹೊಡೆದಾಟದಲ್ಲಿ ಚಾಕು ಇರಿತಕ್ಕೊಳಗಾಗಿ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತೌಶಿಫ್ ಅವರ ಆರೋಗ್ಯ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.