ನಿರಂತರ ಮಳೆ: ಗದಗ ಜಿಲ್ಲೆಯ ಶಾಲೆಗಳಿಗೆ ರಜೆ
ಪ್ರಜಾಪಥ ವಾರ್ತೆ
ಗದಗ: ಗದಗ-ಬೆಟಗೇರಿ ಅವಳಿ ನಗರ ಸೇರಿ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲಾಧಿಕಾರಿಗಳು ಗದಗ ರವರ ಅನುಮತಿಯನ್ನು ಪಡೆದು ಇಂದು ಗದಗ್ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳಿಗೆ ಇಂದು ರಜೆಯನ್ನ ನೀಡಲಾಗಿದೆ. ಬರುವ ಸರ್ಕಾರಿ ರಜಾ ದಿನಗಳಂದು ಶಾಲೆಗಳನ್ನು ನಡೆಸಲು ಸೂಚನೆಯನ್ನು ನೀಡಲಾಗುವುದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯ ಶಿಕ್ಷಕರಿಗೆ ಮಾಹಿತಿಯನ್ನು ನೀಡಲು ಸೂಚಿಸಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ (ಆಡಳಿತ) ಉಪನಿರ್ದೇಶಕರಾದ ಜಿ.ಎಂ. ಬಸವಲಿಂಗಪ್ಪ ಅವರು ತಿಳಿಸಿದ್ದಾರೆ.