ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ ಇನ್ನಿಲ್ಲ- ಹೃದಯಾಘಾತದಿಂದ ಸಾವು

Spread the love

ಕೆಪಿಸಿಸಿ ಸಭೆಯಲ್ಲಿ ಪಾಲ್ಗೊಂಡಿದ್ದ ವೇಳೆ ಕುಸಿದು ಬಿದ್ದ ಬಿದರೂರ

 

ಪ್ರಜಾಪಥ ವಾರ್ತೆ

ಗದಗ/ಬೆಂಗಳೂರು: ರೋಣ ಹಾಗೂ ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ ಅವರಿಗೆ ತೀವ್ರ ಹೃದಯಾಘಾತವಾಗಿದೆ. ಚಿಕಿತ್ಸೆ ಫಲಿಸದೇ  ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಶುಕ್ರವಾರ ಬೆಂಗಳೂರಿನಲ್ಲಿ ಕೆಪಿಸಿಸಿ ಕರೆದಿದ್ದ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಅವರು ಪಾಲ್ಗೊಂಡಿದ್ದರು.

ಈ ವೇಳೆ ಅವರು ಕುಸಿದು ಬಿದ್ದಿದ್ದಾರೆ. ಅವರು ಶಾಸಕ ಹಾಗೂ ಕಾಂಗ್ರೆಸ್ ನ ಹಿರಿಯ ಮುಖಂಡ ಎಚ್.ಕೆ. ಪಾಟೀಲ ಅವರು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದರು.

Leave a Reply

Your email address will not be published. Required fields are marked *