ಸಾಲಬಾಧೆ: ವಿಷ ಸೇವಿಸಿ ರೈತ ಆತ್ಮಹತ್ಯೆ
ಪ್ರಜಾಪಥ ವಾರ್ತೆ
ಗದಗ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೈತರೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿರುವ ಘಟನೆ ನಗರದಲ್ಲಿ ನಡೆದಿದೆ.
ತಾಲೂಕಿನ ಹೊಂಬಳ ಗ್ರಾಮದ ಚಂದ್ರಶೇಖರ ಸಂಕಮ್ಮನವರ ಸಾವಿಗೀಡಾದ ರೈತ.
ರೈತ ಚಂದ್ರಶೇಖರ ಅವರು ಡಿ. 1ರಂದು ತನ್ನ ಜಮೀನಿಗೆ ಹೋಗಿ ಯಾರು ಇಲ್ಲದನ್ನು ಗಮನಿಸಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದರು. ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಮುಂದುವರಿಯಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ರಾತ್ರಿ ಅಸುನಿಗಿದ್ದಾನೆ.
ವಿವಿಧ ಬ್ಯಾಂಕ್ ಗಳಿಂದ ಸುಮಾರು ಎರಡು ಲಕ್ಷ ರೂಪಾಯಿ ಸಾಲ ಮಾಡಿದ್ದ ಎಂದು ತಿಳಿದು ಬಂದಿದೆ. ಜೊತೆಗೆ ಪ್ರಸಕ್ತ ವರ್ಷ ಸುರಿದ ಭಾರಿ ಪ್ರಮಾಣದಲ್ಲಿ ಮಳೆಯಿಂದ ಈರುಳ್ಳಿ, ಮೆಣಸಿನಕಾಯಿ ಬೆಳೆ ನಷ್ಟದಿಂದಾಗಿ ರೈತ ಕುಗ್ಗಿ ಹೋಗಿದ್ದರು. ಆದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.