ನಾಳೆಯ ಬಂದ್ ಹಿಂಪಡೆದ ಕಾಂಗ್ರೆಸ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಟ್ವೀಟ್
ಪ್ರಜಾಪಥ ವಾರ್ತೆ
ಗದಗ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ 40 ಪರ್ಸೆಂಟೇಜ್ ಸರ್ಕಾರ. ಈ ಬಗ್ಗೆ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಮಾ.9 ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕರೆ ನೀಡಿದ್ದ ‘ಎರಡು ಗಂಟೆ ಅವಧಿಯ ಬಂದ್’ ಕೈಬಿಡಲಾಗಿದೆ.
ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಟ್ವೀಟ್ ಮಾಡಿದ್ದು, ನಮಗೆ ಭ್ರಷ್ಟಾಚಾರ ವಿರುದ್ಧದ ಹೋರಾಟದ ಜೊತೆ ಯುವಕರ ಭವಿಷ್ಯವೂ ಮುಖ್ಯ. ಮಾ.9 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗುವುದರಿಂದ ಅವರ ಹಿತದೃಷ್ಟಿಯಿಂದ ಮತ್ತು ಪರೀಕ್ಷೆಗೆ ತೆರಳುವ ಪರೀಕ್ಷಾರ್ಥಿಗಳಿಗೆ ಗೊಂದಲ ಉಂಟಾಗಬಾರದು ಎಂಬ ಕಾರಣಕ್ಕೆ ‘ಬಂದ್ ಹಿಂಪಡೆಯಲಾಗಿದೆ.
ಆದರೆ, ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ವಿವಿಧ ಹಂತದ ಹೋರಾಟ ಮುಂದುವರಿಯಲಿದೆ ಎಂದು ಅವರು ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ.