ಗದಗನ ಗ್ರಾವಿವಿಯ ಮೂರನೇ ಘಟಿಕೋತ್ಸವ-ಶಿವಾಜಿ ಕಾಗಣೇಕರ್ ಗೆ ರಾಜ್ಯಪಾಲರಿಂದ ‘ಗೌರವ ಡಾಕ್ಟರೇಟ್’ ಪದವಿ ಪ್ರದಾನ

Spread the love

 

ಪ್ರಜಾಪಥ ವಾರ್ತೆ

ಗದಗ: ತಾಲೂಕಿನ ನಾಗಾವಿಯ ಬಳಿಯ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ 3ನೇ ಘಟಿಕೋತ್ಸವದಲ್ಲಿ ಸಮಾಜ ಸುಧಾರಣೆ ಮತ್ತು ದೀನ ದಲಿತರ ಸಬಲೀಕರಣ ಕ್ಷೇತ್ರದಲ್ಲಿನ ಮಹತ್ವದ ಕೊಡುಗೆಗಾಗಿ ಬೆಳಗಾವಿಯ ಶಿವಾಜಿ ಕಾಗಣಿಕರ್ ಅವರಿಗೆ ‘ಡಾಕ್ಟರ್ ಆಫ್ ಲೆಟರ್ಸ್’ ಪದವಿ ನೀಡಿ ಗೌರವಿಸಲಾಯಿತು.

ರಾಜ್ಯಪಾಲ ಹಾಗೂ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಕುಲಾಧಿಪತಿ ಥಾವರ್ ಚಂದ ಗೆಹ್ಲೋಟ್ ಅವರು ಪದವಿ ಪ್ರದಾನ ಮಾಡಿದರು.

ಇಂಫಾಲದ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಡಾ. ಸುಬ್ಬಣ್ಣ ಅಯ್ಯಪ್ಪನ್ ಅವರು ಘಟಿಕೋತ್ಸವ ಭಾಷಣ ಮಾಡಿದರು.

10 ವಿವಿಧ ಸ್ನಾತಕೋತ್ತರ ಕಾರ್ಯಗಳ 182 ವಿದ್ಯಾರ್ಥಿಗಳು ಮತ್ತು ಡಿಪ್ಲೊಮಾ ಕಾರ್ಯಗಳ 10 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪದವಿ ಪ್ರದಾನ ಮಾಡುವುದರ ಜೊತೆಗೆ ವಿವಿಧ ಸ್ನಾತಕೋತ್ತರ ವಿಭಾಗಗಳಲ್ಲಿ ಅತ್ಯಧಿಕ ಅಂಕ ಗಳಿಸಿದ 10 ಸಾಧಕರಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು.

ಗ್ರಾಮೀಣಾಭಿವೃದ್ಧಿ ವಿವಿ ಕುಲಪತಿ ವಿಷ್ಣುಕಾಂತ ಚಟಪಲ್ಲಿ, ಕುಲಸಚಿವ ಬಸವರಾಜ ಲಕ್ಕಣ್ಣವರ, ಜಿಪಂ ಸಿಇಒ ಡಾ. ಸುಶೀಲಾ ಬಿ. ಸೇರಿ ಹಲವರು ಇದ್ದರು.

Leave a Reply

Your email address will not be published. Required fields are marked *