ಎಚ್.ಕೆ. ಪಾಟೀಲರಿಗೆ ಮಾತೃವಿಯೋಗ
ಹುಲಕೋಟಿಯಲ್ಲಿ ನಾಳೆ ಮಧ್ಯಾಹ್ನ 2ಕ್ಕೆ ಅಂತ್ಯಕ್ರಿಯೆ
ಪ್ರಜಾಪಥ ವಾರ್ತೆ
ಹುಲಕೋಟಿ (ಗದಗ): ಸಹಕಾರ ರಂಗದ ಭೀಷ್ಮ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮಾಜಿ ಅಧ್ಯಕ್ಷ ದಿ.ಕೆ.ಎಚ್. ಪಾಟೀಲ ಅವರ ಧರ್ಮಪತ್ನಿ, ಗದಗ ತಾಲ್ಲೂಕಿನ ಹುಲಕೋಟಿಯ ನಿವಾಸಿ ಶ್ರೀಮತಿ ಪದ್ಮಾವತಿ ಕೃಷ್ಣಗೌಡ ಪಾಟೀಲ (88) ಅವರು ಸೋಮವಾರ ನಿಧನರಾದರು.
ಕಳೆದ ಕೆಲ ದಿನಗಳಿಂದ ವಯೋಸಹಜ ತೊಂದರೆಗಳಿAದ ಬಳಲುತ್ತಿದ್ದ ಶ್ರೀಮತಿ ಪದ್ಮಾವತಿ ಅವರಿಗೆ ಮಹಾರಾಷ್ಟç ಕಾಂಗ್ರೆಸ್ ಉಸ್ತು ವಾರಿಯೂ ಆಗಿರುವ ಕಾಂಗ್ರೆಸ್ನ ಹಿರಿಯ ಶಾಸಕ ಎಚ್.ಕೆ. ಪಾಟೀಲ ಸೇರಿ ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳನ್ನು ಅಪಾರ ಬಂಧು-ಬಳಗವಿದೆ.
ಇAದು ಅಂತ್ಯಕ್ರಿಯೆ: ಮೃತರ ಅಂತ್ಯಕ್ರಿಯೆ ಮಂಗಳವಾರ (ಏ.5) ಮಧ್ಯಾಹ್ನ 2 ಗಂಟೆಗೆ ಸ್ವಗ್ರಾಮ ಹುಲಕೋಟಿಯ ಮುಕ್ತಿಧಾಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಗ್ರಾಮದಲ್ಲಿ ನೀರವ ಮೌನ: ಶ್ರೀಮತಿ ಪದ್ಮಾವತಿ ಪಾಟೀಲ ಅವರ ನಿಧನದಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.
ಗಣ್ಯರ ಸಂತಾಪ: ಶ್ರೀಮತಿ ಪದ್ಮಾವತಿ ಕೆ. ಪಾಟೀಲ ಅವರ ನಿಧನಕ್ಕೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿ ಯೂರಪ್ಪ, ಸಭಾಪತಿ ಬಸವರಾಜ ಹೊರಟ್ಟಿ, ಲೋಕೋಪ ಯೋಗಿ ಸಚಿವ ಸಿ.ಸಿ. ಪಾಟೀಲ, ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ, ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಪಾಟೀಲ, ಮಾಜಿ ಸಚಿವರಾದ ಎಸ್.ಎಸ್. ಪಾಟೀಲ, ಬಿ.ಆರ್. ಯಾವಗಲ್ಲ, ಮಾಜಿ ಶಾಸಕರಾದ ಶ್ರೀಶೈಲಪ್ಪ ಬಿದರೂರ ಸೇರಿ ಅನೇಕರು ಸಂತಾಪ ಸೂಚಿಸಿದ್ದಾರೆ.